ರಾಜ್ಯದ 8 ರೈಲುಗಳ ಸಂಚಾರ 8 ದಿನಗಳ ಕಾಲ ರದ್ದು..! ಹಲವು ರೈಲುಗಳ ಮಾರ್ಗ ಬದಲಾವಣೆ,ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್ : ಬೆಂಗಳೂರು ನಗರದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರವನ್ನು ತಾಲ್ಕಾಲಿಕವಾಗಿ ಒಂದು ವಾರದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ನಿಟ್ಟೂರು ಮತ್ತು ಸಂಪಿಗೆ ರಸ್ತೆ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಯಲ್ಲಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸುವ ಒಟ್ಟು ಎಂಟು ರೈಲುಗಳ ಸಂಚಾರವನ್ನು ರದ್ದು ಮಾಡಿ ನೈಋತ್ಯ ರೈಲ್ವೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ರೈಲ್ವೆ ಮೇಲ್ಸೇತುವೆಗೆ ಗರ್ಡರ್‌ಗಳನ್ನು ಅಳವಡಿಸುವ ಕಾಮಗಾರಿ ಆರಂಭವಾಗಲಿದೆ. ಹೀಗಾಗಿ ಅ.17 ರಿಂದ 24ರವರೆಗೆ ಅಂದರೆ ಒಂದು ವಾರಗಳ ಕಾಲ ಈ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.ರೈಲು ಸಂಖ್ಯೆ: 07346 ತುಮಕೂರು-ಚಾಮರಾಜನಗರ ಪ್ಯಾಸೆಂಜರ್​​, ರೈಲು ಸಂಖ್ಯೆ: 07328 ಚಾಮರಾಜನಗರ-ಮೈಸೂರು ಪ್ಯಾಸೆಂಜರ್​, ರೈಲು ಸಂಖ್ಯೆ: 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್, ರೈಲು ಸಂಖ್ಯೆ: 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್, ರೈಲು ಸಂಖ್ಯೆ: 06576 ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು, ರೈಲು ಸಂಖ್ಯೆ: 06575 ಕೆಎಸ್​ಆರ್​ ಬೆಂಗಳೂರು-ತುಮಕೂರು ಮೆಮು, ರೈಲು ಸಂಖ್ಯೆ: 16579 ಯಶವಂತಪುರ-ಶಿವಮೊಗ್ಗ ಟೌನ್​ ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆಯ ವಿವರ ಇಲ್ಲಿದೆ. ರೈಲು ಸಂಖ್ಯೆ: 17310 ವಾಸ್ಕೋ ಡ ಗಾಮಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 22687 ಮೈಸೂರು-ವಾರಣಾಸಿ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 82653 ಯಶವಂತಪುರ-ಜೈಪುರ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 19668 ಮೈಸೂರು-ಉದಯಪುರ ಸಿಟಿ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸುತ್ತದೆ. ರೈಲು ಸಂಖ್ಯೆ: 17326 ಮೈಸೂರು-ಬೆಳಗಾವಿ ಎಕ್ಸ್​ಪ್ರೆಸ್​ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸಿಕೆರೆ ಮಾರ್ಗವಾಗಿ ಸಂಚರಿಸುತ್ತದೆ. Click