ನ್ಯೂಸ್ ನಾಟೌಟ್: ಖ್ಯಾತ ಉದ್ಯಮಿ ರತನ್ ಟಾಟಾ (Ratan Tata) ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಇಂದು(ಅ.7) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ (86) ಬಿಪಿಯಲ್ಲಿ ಗಣನೀಯವಾಗಿ ಕುಸಿದ ಕಂಡ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ. ಆಂತಕಗೊಳ್ಳುವ ಅಗತ್ಯವಿಲ್ಲ. ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ. ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ. ಆ ಬಗ್ಗೆ ನನಗೆ ಮಾಹಿತಿ ಇದೆ. ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ. ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ರತನ್ ಟಾಟಾ ಸ್ಪಷ್ಟನೆ ನೀಡಿದ್ದಾರೆ.
Click