ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಹತ್ಯೆ..! ದಲಿತರ ದೌರ್ಜನ್ಯದ ಬಗ್ಗೆ ದೂರು ನೀಡಿದ್ದಕ್ಕೆ ಪ್ರತೀಕಾರದ ಶಂಕೆ..!

ನ್ಯೂಸ್ ನಾಟೌಟ್ : ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ(ಅ.03) ರಾತ್ರಿ ಉತ್ತರ ಪ್ರದೇಶದ ಅಮೇಠಿ ಜಿಲ್ಲೆಯಲ್ಲಿ ನಡೆದಿದೆ.ಮೃತರನ್ನು ಸುನೀಲ್ (35) ಪೂನಮ್ (32) ದೃಷ್ಟಿ (6) ಹಾಗೂ 1 ವರ್ಷದ ಗಂಡು ಮಗು ಎಂದು ಗುರುತಿಸಲಾಗಿದೆ. ಅಮೇಠಿ ಜಿಲ್ಲಾ ಕೇಂದ್ರದಿಂದ 60 ಕಿ.ಮೀ ದೂರ ಇರುವ ಪಾನಹುನಾ ಎಂಬಲ್ಲಿ ಸುನೀಲ್ ಸರ್ಕಾರಿ ಶಾಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅದೇ ಊರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಗುರುವಾರ ರಾತ್ರಿ ಅವರ ಮನೆಯಿಂದ ಗುಂಡಿನ ಸದ್ದು ಕೇಳಿ ನೆರೆಹೊರೆಯವರು ಓಡಿ ಬಂದಾಗ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿರುವುದು ಗೊತ್ತಾಗಿದೆ. ಸುನೀಲ್ ಕುಟುಂಬಕ್ಕೆ ಪರಿಚಿತರಾಗಿದ್ದವರೇ ಕೃತ್ಯ ಎಸಗಿರುವ ಅನುಮಾನ ಇದೆ ಎನ್ನಲಾಗಿದೆ. ದಲಿತ ಕುಟುಂಬಕ್ಕೆ ಸೇರಿದ ರಾಯ್ ಬರೇಲಿ ಮೂಲದ ಸುನೀಲ್ ಅವರು ಕಳೆದ ತಿಂಗಳು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ರಾಯ್ ಬರೇಲಿಯ ಚಂದನ್ ವರ್ಮಾ ಎನ್ನುವರ ವಿರುದ್ಧ ದೂರು ದಾಖಲಿಸಿದ್ದರು. ನಮಗೇನಾದರೂ ತೊಂದರೆ ಆದರೆ ಚಂದನ್ ವರ್ಮಾನೇ ಹೊಣೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. Click