ನ್ಯೂಸ್ ನಾಟೌಟ್ : ಪ್ರಾಧ್ಯಾಪಕಿಯೊಬ್ಬರು ತರಗತಿ ಕೊಠಡಿಯಲ್ಲೇ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ತಿಲಕ್ ನಗರದ ಖಾಸಗಿ ಪಿಯು ಕಾಲೇಜಿನಲ್ಲಿ ಸೋಮವಾರ(ಅ.14) ವರದಿಯಾಗಿದೆ.
ಅ.14ರ ಸೋಮವಾರದಂದು ಕಾಲೇಜಿಗೆ ಬಂದಿದ್ದ ಶಬಾನ ಬೆಳಗ್ಗೆ ಪ್ರಾಂಶುಪಾಲರ ಕೊಠಡಿಗೆ ತೆರಳಿ ಮಾತನಾಡಿ ಹೊರಬಂದಿದ್ದರು. ಇದಾದ ಕೆಲ ಹೊತ್ತಿನ ಬಳಿಕ ತರಗತಿ ಕೊಠಡಿಯಲ್ಲಿಯೇ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಸ್ವಸ್ಥಗೊಂಡ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಬಾನ(44) ಎಂಬಾಕೆ ಆತ್ಮಹತ್ಯೆಗೆ ಯತ್ನಿಸಿದ ಇಂಗ್ಲಿಷ್ ಪ್ರಾಧ್ಯಾಪಕಿ ಎಂದು ಗುರುತಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರ ಕಿರುಕುಳಕ್ಕೆ ಬೇಸತ್ತು ಪ್ರಾಧ್ಯಾಪಕಿಯು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಾಲೇಜಿಗೆ ತಿಲಕ್ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಿಂದ ದೊರೆತ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Click