ನ್ಯೂಸ್ ನಾಟೌಟ್: ಆತ್ಮಹತ್ಯೆಗೆ ಶರಣಾದ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ನಾಯಕ ಬಿ. ಎಂ ಮುಮ್ತಾಝ್ ಅಲಿ ಸಾವಿಗೆ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಸಂತಾಪ ವ್ಯಕ್ತಪಡಿಸಿದ್ದಾರೆ.
ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮುಮ್ತಾಝ್ ಅಲಿ ಯಶಸ್ವಿ ಉದ್ಯಮಿಯಾಗಿ ಹೆಸರು ಮಾಡಿದ್ದರು. ಮಂಗಳೂರಿನ ಯಾವುದೇ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಮುಂಚೂಣಿಯಲ್ಲಿ ನಿಂತು ನೇತೃತ್ವ ನೀಡುತ್ತಿದ್ದ ಇವರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗುರುತಿಸುವ ವ್ಯಕ್ತಿತ್ವವಾಗಿದ್ದರು. ಹಲವಾರು ಧಾರ್ಮಿಕ, ಸಾಮಾಜಿಕ ಶೈಕ್ಷಣಿಕ ಸಂಘ ಸಂಸ್ಥೆಗಳ ಬೆಳವಣಿಗೆಯಲ್ಲಿ ಇವರ ಪಾತ್ರ ಬಹಳ ದೊಡ್ಡದಾಗಿತ್ತು.
ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿದ್ದ ಮೇರು ವ್ಯಕ್ತಿತ್ವದ ಮುಮ್ತಾಝ್ ರವರ ಅಗಲುವಿಕೆ ಸಮಾಜಕ್ಕೆ ಮತ್ತು ಸಮುದಾಯಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಅವರ ಕುಟುಂಬ ಮತ್ತು ಬಂಧುಗಳಿಗೆ ಮುಮ್ತಾಝ್ ರವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ದಯ ಪಾಲಿಸಲಿ ಎಂದು ಅನ್ವರ್ ಸಾದತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click