ನ್ಯೂಸ್ ನಾಟೌಟ್: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಭಾನುವಾರ ತಡರಾತ್ರಿ ಸುಳ್ಯದ ಕಾರ್ಯತೋಡಿ ದೇವಸ್ಥಾನಕ್ಕೆ ಹೋಗುವ ಜಂಕ್ಷನ್ ಬಳಿ ನಡೆದಿದೆ.
ದುರ್ಘನೆಯಲ್ಲಿ ಯಾರಿಗೂ ಯಾವುದೇ ಅಪಾಯಗಳಾಗಿಲ್ಲ. ಕಾರು ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಕಾರು ಗುದ್ದಿದರ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಕೆಳಕ್ಕೆ ಬಿದ್ದಿದೆ. ಕೆಲವು ಕಡೆಗೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕೇರಳ ರಿಜಿಸ್ಟ್ರೇಶನ್ ಹೊಂದಿರುವ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.