ನ್ಯೂಸ್ ನಾಟೌಟ್: ಮಲೇಶಿಯಾದ ಬುಕಟ್ಟಿ ಜೆಲ್ಲಿ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಹೆಮ್ಮೆಯ ಮಹಿಳಾ ಕ್ರೀಡಾಪಟುವೊಬ್ಬರು ಪ್ರಶಸ್ತಿ ಪಡೆದು ದೇಶದ ಗಮನ ಸೆಳೆದಿದ್ದಾರೆ.
ಜಾಲ್ಸೂರು ಗ್ರಾಮದ ತಿಲಕ ನವೀನ್ ಆರ್ತಾಜೆ (ಪಡುಮಜಲು) ಎಂಬವರು ಈ ಸಾಧನೆ ಮಾಡಿದ ಹೆಮ್ಮೆಯ ಮಹಿಳಾ ಕ್ರೀಡಾಪಟು. ಮಲೇಶಿಯಾದ ಬುಕಟ್ಟಿ ಜೆಲ್ಲಿ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದ
ಜಾವಲಿನ್ಲ್ಲಿ ಪ್ರಥಮ ಮತ್ತು 100 ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ದೇಶ ಮತ್ತು ನಮ್ಮ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇವರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕೂಡ ಹಲವು ಬಾರಿ ಪ್ರಶಸ್ತಿಯನ್ನು ಪಡೆದು ಎಲ್ಲರ ಮೆಚ್ಚುಗೆ ಗಳಿಸಿದ್ದರು. ಹಲವಾರು ಕ್ರೀಡಾಕೂಟದಲ್ಲಿ ಭಾಗವಹಿಸಿರುವ ತಿಲಕ ನವೀನ್ ನಾಗಶ್ರೀ ತಂಡದ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ತಂಡದ ನಾಯಕಿಯಾಗಿದ್ದಾರೆ. ಇವರು ಮರ್ಕಂಜ ಗ್ರಾಮದ ಕುದ್ಕುಳಿ ದಾಮೋದರ ಹಾಗೂ ಪದ್ಮಾವತಿ ದಂಪತಿ ಪುತ್ರಿಯಾಗಿದ್ದಾರೆ.