ನ್ಯೂಸ್ ನಾಟೌಟ್: ಸುಳ್ಯದ ಜಟ್ಟಿಪಳ್ಳ ಅಮೈ ಪಾಲಡ್ಕ ಎಂಬಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ಮಹಿಳೆಯ ಹೆಸರು ಬಾಲಕ್ಕಿ ಎಂದು ಗುರುತಿಸಲಾಗಿದ್ದು ಅವರಿಗೆ 55 ವರ್ಷ ವಯಸ್ಸಾಗಿತ್ತು. ಆಕೆ ಸುಳ್ಯದಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಯು ವೈಯಕ್ತಿಕ ಕಾರಣಗಳಿಂದ ಆಗಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.