ನ್ಯೂಸ್ ನಾಟೌಟ್:ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ದೀಪಾವಳಿ ವಿಥ್ ಮೈ ಭಾರತ್ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಆಸ್ಪತ್ರೆಗಳಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರ ಸೇವಾಕಾರ್ಯ ಅಭಿಯಾನದ ಮೂಲಕ ಆರೋಗ್ಯ ಕೇಂದ್ರದ ಭೇಟಿ, ಮಾಹಿತಿ ಮತ್ತು ಸೇವೆ ಅ.29 ಮತ್ತು ಅ.30 ರಂದು ನಡೆಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಪ್ರಾಥಮಿಕ ಆರೋಗ್ಯ ಕೇಂದ್ರ ಅರಂತೋಡು ಇಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಇವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯಿತು.
ತರಬೇತಿ ಪಡೆಯಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದಿರುವ ವಿದ್ಯಾರ್ಥಿಗಳಿಗೆ ಆರೋಗ್ಯ ಕೇಂದ್ರದಲ್ಲಿದ್ದ ಆರೋಗ್ಯಾಧಿಕಾರಿಗಳು ಮತ್ತು ಅಲ್ಲಿನ ಸಿಬ್ಬಂದಿ ವರ್ಗದವರು ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೊರರೋಗಿಯ ಪ್ರಥಮ ಚಿಕಿತ್ಸೆಯನ್ನು ಪಡೆಯುವುದು ಹೇಗೆ ಎಂಬುದನ್ನು ತಿಳಿಸಿದರು. ರೋಗಿಗಳ ಸಕ್ಕರೆ ಕಾಯಿಲೆ, ಬಿ.ಪಿ. ಪರೀಕ್ಷೆ ಮಾಡುವುದು ಮತ್ತು ಆಕ್ಸಿಜನ್ ಅಳವಡಿಸುವುದು, ರೋಗಿಗಳು ಬರುವಾಗ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಲಾಯಿತು.