ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ವಚ್ಛತಾ ಸೋಮವಾರ (ಸೆ.30) ಆಂದೋಲನ ನಡೆಯಿತು.
ಭಾರತ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶನದಂತೆ, ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಸೆ. 17ರಿಂದ ಅ. 1ರವರೆಗೆ ಆಚರಿಸಲಾಗುತ್ತದೆ. ನಂತರ 2ನೇ ಅಕ್ಟೋಬರ್ 2024 ರಂದು ಸ್ವಚ್ಛ ಭಾರತ್ ದಿವಸ್ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿವಿಧ ವಿಭಾಗಗಳು, ಎನ್ ಎಸ್ ಎಸ್ ಘಟಕದ ವತಿಯಿಂದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಭಾಗವಾಗಿ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ಈ ಸಂದರ್ಭ ಫಾರ್ಮಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸವಿನ್ ಸಿ.ಜಿ. ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಸ್ವಚ್ಛ ಪರಿಸರದ ಬಗ್ಗೆ ನಿರ್ದೇಶನ ನೀಡಿದರು.