ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಯಿತು. ಸುಳ್ಯದ ಜ್ಯೋತಿ ಸರ್ಕಲ್ ನಿಂದ ಆರಂಭಗೊಂಡು ರಸ್ತೆ ಬದಿ, ಕಾಲೇಜಿನ ಆಸುಪಾಸು ಸ್ವಚ್ಛಗೊಳಿಸುತ್ತಾ ಚೆನ್ನಕೇಶವ ದೇವಸ್ಥಾನದವರೆಗೆ ಜಾಥ ನಡೆಸಲಾಯಿತು.
ನಮ್ಮ ಮನೆ ನಮ್ಮ ಊರು ನಮ್ಮ ದೇಶದ ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡೋಣ, ಸ್ವಚ್ಛತೆಯೇ ಆರೋಗ್ಯದ ಮೂಲ, ಆರೋಗ್ಯವೇ ಭಾಗ್ಯ, ಸ್ವಚ್ಛತೆ ಎಂದರೆ ಒಂದು ದಿನದ ಕೆಲಸವಲ್ಲ, ನಿತ್ಯ ನಿರಂತರ ಎಂಬ ಘೋಷ ವಾಕ್ಯದೊಂದಿಗೆ ಜಾಥಾ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಎನ್ ಎಸ್ ಎಸ್ ಅಧಿಕಾರಿ ಡಾ| ಪ್ರಮೋದ್ ಪಿ.ಎ, ಸಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ಅಧ್ಯಕ್ಷ ಸಾತ್ವಿಕ್ ಮಡಪ್ಪಾಡಿ, ಸುಳ್ಯ ತಹಶೀಲ್ದಾರ್ ಅರವಿಂದ್ ಕೆಎಂ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ ಎಚ್ ಸುಧಾಕರ್, ಸುಳ್ಯ ಠಾಣಾ ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ , ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಡಾ| ನಂದಕುಮಾರ್, ಸುಳ್ಯ ವಕೀಲರ ಸಂಘದ ಕಾರ್ಯದರ್ಶಿ ಜಗದೀಶ್ ಡಿ.ಪಿ., ಸಾಮಾಜಿಕ ಅರಣ್ಯ ಇಲಾಖೆ ಸುಳ್ಯದ ಉಪವಲಯ ಅರಣ್ಯಾಧಿಕಾರಿ ವಿ.ಎಚ್ ಕರಣಿಮಠ, ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ, ಸುಳ್ಯ ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರು ರೊ.ಪಿಪಿ ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್, ಸುಳ್ಯದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ ಉಪಸ್ಥಿತರಿದ್ದರು.