ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಮಂಕಾಗಿದ್ದ ಲೋಕಾಯುಕ್ತ ಅಧಿಕಾರಿಗಳು ಇದ್ದಕ್ಕಿದ್ದಂತೆ ಎದ್ದು ಬಿರುಸಿನ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಚೇರಿ ನಿರ್ವಹಣೆ ಮತ್ತು ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳು ಕಂಡು ಬಂದಿದೆ. ಈ ಬಗ್ಗೆ ಅಧಿಕಾರಿಗಳನ್ನು ಲೋಕಾಯುಕ್ತ ತಂಡ ಪ್ರಶ್ನೆ ಮಾಡಿದಾಗ ಅಧಿಕಾರಿಗಳು ತಡವರಿಸಿಕೊಂಡಿದ್ದಾರೆ. ಕೆಲವರು ಕಿಸೆಯಲ್ಲಿದ್ದ ಖರ್ಚಿಪ್ ತೆಗೆದು ಮುಖ ಒರೆಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಾದ ಎಂ.ಎ ನಟರಾಜ ಮಂಗಳೂರು ತಿಳಿಸಿದ್ದಾರೆ.