ನ್ಯೂಸ್ ನಾಟೌಟ್: ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ಅಕ್ಟೋಬರ್ 31ರಂದು ರಾಷ್ಟೀಯ ಏಕತಾ ದಿನವನ್ನು ಆಚರಿಸಲಾಯಿತು. ದಿವಂಗತ ಶ್ರೀ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಪುಷ್ಪ ನಮನ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಸಂದೇಶವನ್ನು ಸಾರಿದರು.
ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕರಾದ ಡಾ. ಮಮತಾ ಕೆ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲ ಬೋಧಕ ವರ್ಗದವರು ಮತ್ತು ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು. ಉಪನ್ಯಾಸಕ ಹರಿಪ್ರಸಾದ್ ಅತ್ಯಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.