- +91 73497 60202
- [email protected]
- November 24, 2024 5:52 AM
ನ್ಯೂಸ್ ನಾಟೌಟ್ : ಇಷ್ಟು ದಿನ ದೊಡ್ಡ, ದೊಡ್ಡ ನಗರಗಳಲ್ಲಿ ಬ್ಯಾಂಕ್ ದರೋಡೆ ಮಾಡುತ್ತಿದ್ದ ತಂಡ ಈಗ ಸಣ್ಣ ತಾಲೂಕಿಗೆ ಬಂದಿದೆ ಎಂದು ಶಂಕಿಸಲಾಗಿದೆ. ದಾವಣಗೆರೆಯ ನ್ಯಾಮತಿಯಲ್ಲಿ ಎಸ್.ಬಿ.ಐ ಬ್ಯಾಂಕ್ ಗೆ ನುಗ್ಗಿ ಅಂದಾಜು ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಲಾಕರ್ ನಿಂದ ಕಳ್ಳರು ದೋಚಿದ್ದಾರೆ. ಈ ಘಟನೆ ಸೋಮವಾರ(ಅ.28) ಬೆಳಕಿಗೆ ಬಂದಿದೆ. ಪ್ರಕರಣ ಗಮನಕ್ಕೆ ಬಂದ ಕೂಡಲೇ ತನ್ನ ತಂಡದೊಂದಿಗೆ ಹೊರಟ ಎಸ್ಪಿ ಉಮಾ ಪ್ರಶಾಂತ್ ಬೆಳ್ಳಂ ಬೆಳ್ಳಗ್ಗೆ ಸ್ಥಳಕ್ಕೆ ಹೋಗಿ ಘಟನಾವಳಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ಅಲ್ಲದೇ ಬೆರಳಚ್ಚು ತಂಡ, ಶ್ವಾನದಳವನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರು ಬ್ಯಾಂಕ್ ನ ಕಿಟಕಿ ಸರಳುಗಳನ್ನು ಮುರಿದು ಲಾಕರ್ ನಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ. ನ್ಯಾಮತಿ ಪಟ್ಟಣದ ನೆಹರು ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಎರಡು ದಿನಗಳ ಹಿಂದೆ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶನಿವಾರ ಹಾಗೂ ಭಾನುವಾರ ಎರಡು ದಿನ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿರಬಹುದು ಎನ್ನಲಾಗಿದೆ. ಕಿಟಕಿಯ ಸರಳುಗಳನ್ನು ಮುರಿದು ಬ್ಯಾಂಕ್ ಗೆ ನುಗ್ಗಿರುವ ಕಳ್ಳರು ಲಾಕರ್ ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ದೋಚಿದ್ದಾರೆ. ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಸ್ಥಳ ಪರಿಶೀಲನೆ ಮಾಡಿ ಐದು ತಂಡ ರಚನೆ ಮಾಡಿದ್ದಾರೆ. ಸಿಸಿಟಿವಿ ಮತ್ತು ಸ್ಥಳೀಯರಿಂದ ಮಾಹಿತಿ ಪಡೆದು ಕಾರ್ಯಾಚರಣೆಗೆ ಇಳಿದಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ