ನ್ಯೂಸ್ ನಾಟೌಟ್: ಯುವತಿಯೊಬ್ಬಳಿಗೆ ಪ್ರೀತಿಸುವಂತೆ ನಿರಂತರವಾಗಿ ಮಾನಸಿಕ ಹಿಂಸೆ ನೀಡಿ 24 ತುಂಡಾಗಿಸುವ ಬೆದರಿಯೊಡ್ಡಿದ್ದ ಆಸಾಮಿಯನ್ನು ಸುರತ್ಕಲ್ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಯನ್ನು ಶಾರಿಕ್ ಎಂದು ಗುರುತಿಸಲಾಗಿದೆ. ಯುವತಿ ನಿರಂತರ ಬೆದರಿಕೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು, ಆತ್ಮಹತ್ಯೆಗೂ ಪ್ರಯತ್ನ ನಡೆಸಿದ್ದಳು, ತಕ್ಷಣ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಯುವತಿಯರನ್ನು ಕೊಂದು ಫ್ರಿಡ್ಜ್ ನಲ್ಲಿ ತುಂಡು ತುಂಡಾಗಿ ಕತ್ತರಿಸಿ ಇಡುವುದು ಒಂದು ಫ್ಯಾಶನ್ ಆಗಿ ಬಿಟ್ಟಿದೆ. ಹೀಗಾಗಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.