ನ್ಯೂಸ್ ನಾಟೌಟ್ :ಕೇರಳದ ವಯನಾಡು ಲೋಕಸಭಾ ಉಪಚುನಾವಣೆ 2024 ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬುಧವಾರ (ಅಕ್ಟೋಬರ್ 23) ನಾಮಪತ್ರ ಸಲ್ಲಿಸಲಿದ್ದಾರೆ. ಬೃಹತ್ ರೋಡ್ ಶೋ ಮೂಲಕ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಪ್ರಿಯಾಂಕಾ ಗಾಂಧಿಯವರು ಕೆಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿದ್ದರು ಸಹ ಅವರದ್ದು ಇದೇ ಮೊದಲ ಚುಣಾವಣೆಯಾಗಿದೆ. ಅವರು ಈ ಹಿಂದೆ ಸಂಸದ ರಾಹುಲ್ ಗಾಂಧಿ ಹಾಗೂ ತಾಯಿ ಪ್ರಧಾನಿ ಸೋನಿಯಾ ಗಾಂಧಿ ಪರ ಅಮೇಥಿಯಲ್ಲಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಒಂದಷ್ಟು ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಆದರೆ ಅವರು ಚುನಾವಣೆ ನಿಂತಿರಲಿಲ್ಲ.
ಇದೀಗ ಎರಡು ಕಡೆಗೆ ಗೆದ್ದು ಬೀಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ವಯನಾಡು ಟಿಕೆಟ್ ನೀಡಲಾಗಿದೆ. ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ಮೊದಲ ಚುನಾವಣೆ ಎದುರಿಸಲು ಭರ್ಜರಿ ತಯಾರಿ ನಡೆಸಿದ್ದಾರೆ.
ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬುಧವಾರದಂದು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವ ಹಿನ್ನೆಲೆ ಗಾಂಧಿ ಕುಟುಂಬ ಗುಂಡ್ಲುಪೇಟೆ ಮೂಲಕ ತೆರಳಿದ್ದಾರೆ.
Click