ನ್ಯೂಸ್ ನಾಟೌಟ್: ಸುಳ್ಯದ ಪ್ರತಿಷ್ಠಿತ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನವನ್ನು ಆಚರಿಸಲಾಯಿತು. ವಿಶ್ವ ಹೃದಯ ದಿನವು ಹೃದಯರಕ್ತನಾಳದ ಕಾಯಿಲೆಗಳ(CVD) ಬಗ್ಗೆ ಜಾಗೃತಿ ಮೂಡಿಸಲು ಮತ್ತು ಹೃದಯದ ಆರೋಗ್ಯವನ್ನು ಉತ್ತೇಜಿಸಲು ಸೆಪ್ಟೆಂಬರ್ 29 ರಂದು ಪ್ರತಿವರ್ಷ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ | ಕೆ.ವಿ. ಚಿದಾನಂದ ಉದ್ಘಾಟಿಸಿದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ| ಸಿಆರ್ ಭಟ್ ಮಾತನಾಡಿ, ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ, ಹೃದಯ ಸ್ತಂಭನ ಇತ್ಯಾದಿಗಳಿಂದ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ಕಾರಣಗಳು ಮತ್ತು ಅದನ್ನು ತಡಗಟ್ಟುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿದರು. ಬಳಿಕ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ಹಾಗೂ ಕ್ಯಾಥ್ ಲ್ಯಾಬ್ ಸೌಲಭ್ಯವಿದ್ದು, ಅಗತ್ಯ ಸಂದರ್ಭಗಳಲ್ಲಿ ಉಪಯೋಗಿಸುವಂತೆ ಎಂದು ಕರೆ ನೀಡಿದರು.
ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಇದರ ಉಪಾಧ್ಯಕ್ಷೆ ಶೋಭಾ ಚಿದಾನಂದ, ಅಲೈಡ್ ಹೆಲ್ತ್ ಸೈನ್ಸ್ ಇದರ ಶೈಕ್ಷಣಿಕ ಸಂಯೋಜಕ ಡಾ.ನವ್ಯಾ, ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಪ್ರಕಾಶ್ ರಾವ್, ಡಾ ಸುಬ್ರಹ್ಮಣ್ಯ, ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.