ನ್ಯೂಸ್ ನಾಟೌಟ್:ಯೂಟ್ಯೂಬ್ (YouTube) ಚಾನಲ್ ಮೂಲಕ ಮನರಂಜನೆ ನೀಡುತ್ತಿದ್ದ ದಂಪತಿ ನಿಗೂಢ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ. ಭಾನುವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಗಿದ್ದು,ಕೇರಳದ (Kerrala) ಪರಸ್ಸಾಲ (Parassala) ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಸೆಲ್ವರಾಜ್ (45), ಪ್ರಿಯಾ (40) ಶವವಾಗಿ ಪತ್ತೆಯಾದ ದಂಪತಿ.ಯೂಟ್ಯೂಬ್ನಲ್ಲಿ ಇವರು ಸಕ್ರೀಯರಾಗಿದ್ದರು. ಆದರೆ ಕಳೆದ ಎರಡು ದಿನಗಳಿಂದ ಮನೆಯಿಂದ ಆಚೆ ಬಾರದ ಕಾರಣ ನೆರೆಹೊರೆಯವರಿಗೆ ಯಾಕೋ ಅನುಮಾನ ಮೂಡಿ ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಈ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.
ಸೆಲ್ವರಾಜ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಾ ಮೃತದೇಹ ಹಾಸಿಗೆ ಮೇಲೆ ಪತ್ತೆಯಾಗಿದೆ ಎಂದು ಪರಸ್ಸಾಲ ಪೊಲೀಸರು ತಿಳಿಸಿದ್ದಾರೆ.ಪ್ರಾಥಮಿಕ ತನಿಖೆಯ ಪ್ರಕಾರ, ಎರಡು ದಿನಗಳ ಹಿಂದೆ ಘಟನೆ ಸಂಭವಿಸಿರಬಹುದು ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.