- +91 73497 60202
- [email protected]
- November 29, 2024 7:08 PM
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್..? ಹೊಸ ಮಸೂದೆ ಅಂಗೀಕಾರ..!
ನ್ಯೂಸ್ ನಾಟೌಟ್: 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ (Social Media) ಬಳಕೆಗೆ ನಿಷೇಧ ವಿಧಿಸುವ ಮಸೂದೆಯನ್ನು ಆಸ್ಟ್ರೇಲಿಯಾ ಸರ್ಕಾರ ಅಂಗೀಕರಿಸಿದೆ. ಈ ಕಾಯ್ದೆ ಭಾರತದಲ್ಲೂ ಜಾರಿಗೆ ತರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮಸೂದೆಯನ್ನು ಉಭಯ ಪಕ್ಷಗಳ ಬೆಂಬಲದೊಂದಿಗೆ ಎರಡೂ ಸಂಸದೀಯ ಸದನಗಳು ಅಂಗೀಕರಿಸಿವೆ. ಹದಿಹರೆಯದವರು ಖಾತೆಗಳನ್ನು ಹೊಂದುವುದನ್ನು ತಡೆಯಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಶೀಘ್ರದಲ್ಲೇ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ. ಸಾಮಾಜಿಕ ಮಾಧ್ಯಮ ಸಂಸ್ಥೆಗಳು ನಿಯಮವನ್ನು ಅನುಸರಿಸಲು ವಿಫಲವಾದಲ್ಲಿ 274 ಕೋಟಿ ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೊಸ ನಿಯಮ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವ ಆಸ್ಟ್ರೇಲಿಯನ್ನರು ತಮ್ಮ ಫೋನ್‌ಗಳಿಂದ ದೂರವಿರಿ. ಈಜುಕೊಳದಲ್ಲಿ ಈಜಾಡಿ, ಕ್ರಿಕೆಟ್ ಮೈದಾನ, ಟೆನಿಸ್ ಮತ್ತು ನೆಟ್‌ಬಾಲ್ ಅಂಕಣಗಳಲ್ಲಿ ಆಟವಾಡಿ ಎಂದು ಪ್ರಧಾನಿ ಕರೆ ನೀಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ