ನ್ಯೂಸ್ ನಾಟೌಟ್: ಕಳೆದ ಎರಡು ದಿನಗಳಿಂದ ಕರಾವಳಿಯ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದ್ದು, ಭಾನುವಾರ ಸಾಯಂಕಾಲ ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಬಾಲಕನ್ನು ಪೇರಮೊಗ್ರು ಸಮೀಪದ ಮುರಿಯಾಜೆ ನಿವಾಸಿ ಚಂದ್ರಹಾಸ ಅವರ ಪುತ್ರ ಸುಬೋಧ್ ಸಿ(14) ಎಂದು ಗುರುತಿಸಲಾಗಿದೆ. ಈತ ಭಾನುವಾರ ಸಾಯಂಕಾಲ ಮನೆಯ ಸಿಟೌಟ್ನಲ್ಲಿ ಕುಳಿತ್ತಿದ್ದಾಗ ಸಿಡಿಲು ಬಡಿದಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಬಾಲಕ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೃತ ಬಾಲಕ ತಂದೆ ತಾಯಿ ಮತ್ತು ಅವಳಿ ಸಹೋದರರನ್ನು ಅಗಲಿದ್ದಾನೆ. ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.