- +91 73497 60202
- [email protected]
- November 25, 2024 6:39 AM
ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತನ ಶವ ಪತ್ತೆ..! ಮಹಿಳೆಯ ಬಂಧನ..!
ನ್ಯೂಸ್ ನಾಟೌಟ್: ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ ಘಟನೆ ಪಶ್ಚಿಮ ಬಂಗಾಳದ ಉಸ್ತಿಯಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ ಪಕ್ಷದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ( ನ.8) ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್ ಅವರ ರಕ್ತಸಿಕ್ತ ಶವ ಪತ್ತೆಯಾಗಿತ್ತು. ನವೆಂಬರ್ 5 ರಿಂದ ಅವರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಕರ್ತನ ಕೊಲೆಗೆ ಸಂಬಂಧಿಸಿದಂತೆ ಬಿಜೆಪಿಯು ತೃಣಮೂಲ ಕಾಂಗ್ರೆಸ್ ನ (ಟಿಎಂಸಿ) ಕೈವಾಡವಿದೆ ಎಂದು ಆರೋಪಿಸಿದೆ. ಕೊಲೆ ಸಂಬಂಧ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದು, ಈ ಕೊಲೆ ವೈಯಕ್ತಿಕ ವಿಚಾರಕ್ಕೆ ನಡೆದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಬಂಧಿತ ಮಹಿಳೆ, ನಾಸ್ಕರ್ ಗೆ ಹರಿತವಾದ ಆಯುಧಗಳಿಂದ ಹೊಡೆದು ಆತನನ್ನು ಹತ್ಯೆಗೈದಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಆಕೆಗೆ ಬೇರೆ ಯಾರಾದರೂ ನೆರವು ನೀಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ