ನ್ಯೂಸ್ ನಾಟೌಟ್: ಕರ್ನಾಟಕದಲ್ಲಿನ ಬಡತನ ರೇಖೆಗಿಂತ ಮೇಲಿರುವವರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂಬ ಚರ್ಚೆ ನಡುವೆಯೇ ಯಾವುದೇ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ ಬದಲಾಗಿ ಅನರ್ಹರನ್ನು APLಗೆ ವರ್ಗಾಯಿಸಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
‘ಪಡಿತರ ಚೀಟಿ ವಿಚಾರವನ್ನು ಸಮ್ಮನೇ ರಾಜಕೀಯಗೊಳಿಸಲಾಗುತ್ತಿದೆ. ಸರ್ಕಾರ ಯಾವುದೇ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ರದ್ದು ಮಾಡಿಲ್ಲ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ರದ್ದು ಮಾಡಿಲ್ಲ ಬದಲಾಗಿ ಎಪಿಎಲ್ ವರ್ಗಕ್ಕೆ ವರ್ಗಾಯಿಸಲಾಗಿದೆ” ಎಂದು ಹೇಳಿದ್ದಾರೆ.
‘ಸದ್ಯ ಜನಸಂಖ್ಯೆಯ ಸುಮಾರು 80 ಪ್ರತಿಶತ ಜನರು ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ. ಆದಾಗ್ಯೂ, ಕೆಲವು ಅನರ್ಹ ವ್ಯಕ್ತಿಗಳು ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ ಎಂಬ ಮಾಹಿತಿ ಬಂದಿದೆ. ನಾವು ಅಂತಹ ಕಾರ್ಡ್ಗಳನ್ನು ಮರುವರ್ಗೀಕರಿಸುವ ಕೆಲಸ ಮಾಡುತ್ತಿದ್ದೇವೆ. ಅವುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಿಲ್ಲ, ಆದರೆ ಅವುಗಳನ್ನು ಎಪಿಎಲ್ ವರ್ಗಕ್ಕೆ ವರ್ಗಾಯಿಸುತ್ತೇವೆ.” ಎಂದಿದ್ದಾರೆ.
ನಾವು ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಎಪಿಎಲ್ ವರ್ಗಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಪರಿಣಾಮವಾಗಿ, ಕೆಲವು ವ್ಯಕ್ತಿಗಳು ಹೊಸ ಬಿಪಿಎಲ್ ಕಾರ್ಡ್ ಅನ್ನು ಸ್ವೀಕರಿಸದಿರಬಹುದು, ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಮಾತ್ರ ಮರು ವರ್ಗೀಕರಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
Click