ನ್ಯೂಸ್ ನಾಟೌಟ್: ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಇದರಿಂದ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ಗೆ ಮುಖಭಂಗವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಯತ್ನಾಳ್ ಮೂರು ಕಡೆ ನಮ್ಮ ಅಭ್ಯರ್ಥಿಗಳು ಸೋಲಲು ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಣ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ವಕ್ಫ್ ವಿವಾದ ಚುನಾವಣೆಯಲ್ಲಿ ವರ್ಕೌಟ್ ಆಗಲಿಲ್ವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ್, ವಕ್ಫ್ ವಿವಾದ ಈಗ ಆರಂಭವಾಗಿದೆ, ಜನರಿಗೆ ಇನ್ನೂ ಗೊತ್ತಾಗಬೇಕಿದೆ. ವಕ್ಫ್ ವಿಚಾರವಾಗಿಯೇ ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡಿದರು. ಉದ್ಧವ್ ಠಾಕ್ರೆ ಔರಂಗಜೇಬ್ ಸಮಾಧಿಗೆ ಹೋಗಿ ನಮಸ್ಕಾರ ಮಾಡಿದ್ರು. ಆದರೆ ಉದ್ಧವ್ ಠಾಕ್ರೆಯನ್ನು ಮಹಾರಾಷ್ಟ್ರದ ಜನರು ಮುಳುಗಿಸಿದ್ರು. ಮಹಾರಾಷ್ಟ್ರದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ ಎಂದು ತಿವಿದರು.