ನ್ಯೂಸ್ ನಾಟೌಟ್: ಕಳೆದ ಭಾನುವಾರ ಗ್ರೇಟರ್ ಟೊರೊಂಟೊ ಏರಿಯಾ (ಜಿಟಿಎ) ದಲ್ಲಿನ ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಲು ಕಾರಣವಾದ ಖಲಿಸ್ತಾನಿ ಉಗ್ರ ಹಾಗು ಈ ದಾಳಿಯ ಹಿಂದಿನ ಪ್ರಮುಖ ಮಾಸ್ಟರ್ ಮೈಂಡ್ ನನ್ನು ಇಂದು(ನ.10) ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆನಡಾದಲ್ಲಿ ಖಲಿಸ್ತಾನ್ ಪರ ಜನಾಭಿಪ್ರಾಯ ಸಂಗ್ರಹಿಸಿ, ಹಿಂದೂ ದೇಗುಲ ಮತ್ತು ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್ ರೂಪಿಸುತ್ತಿದ್ದ ತಂಡದಲ್ಲಿ ಈತನೇ ಪ್ರಮುಖ ವ್ಯಕ್ತಿ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯನ್ನು ಸಪೀಲ್ ಪ್ರಾದೇಶಿಕ ಪೊಲೀಸ್ ಬ್ರಾಂಪ್ಟನ್ ನಿವಾಸಿ 35 ವರ್ಷದ ಇಂದರ್ ಜೀತ್ ಗೋಸಾಲ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಾರಕಾಯುಧದಿಂದ ಹಲ್ಲೆ ಮಾಡಿದ ಆರೋಪವೂ ಇದೆ.
ಆದರೆ ಆತನ ಬಂಧನ ಕೆಲವೇ ಗಂಟೆಗಳಲ್ಲಿ ಷರತ್ತುಗಳ ಅಡಿಯಲ್ಲಿ ಬಿಡುಗಡೆ ಮಾಡಲಾಗಿದೆ ಮತ್ತು ಬ್ರಾಂಪ್ಟನ್ ನಲ್ಲಿರುವ ಒಂಟಾರಿಯೊ ಕೋರ್ಟ್ ಆಫ್ ಜಸ್ಟಿಸ್ ಗೆ ಆತನನ್ನು ಮುಂದಿನ ದಿನಗಳಲ್ಲಿ ವಿಚಾರಣೆಗೆ ಕರೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ನವೆಂಬರ್ 8 ರಂದು ಹಿಂದೂ ಸಭಾ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕೆನಡಾದ ಹಿಂದೂ ಭಕ್ತರ ಮೇಲೆ ದಾಳಿ ಮಾಡಲಾಗಿತ್ತು. ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಇಂದರ್ಜೀತ್ ಗೋಸಾಲ್ ಎಂದು ತಿಳಿದ ನಂತರ ಆತನನ್ನು ಅರೆಸ್ಟ್ ಮಾಡಲಾಗಿತ್ತು.
ದಿ ಗೋರ್ ರೋಡ್ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಹಿಂದೂಗಳ ಮೇಲೆ ದಾಳಿ ನಡೆಸಿ ದೈಹಿಕ ಹಿಂಸೆ ಮಾಡಲಾಗಿತ್ತು. ಕೆಲವು ಖಲಿಸ್ತಾನಿ ಧ್ವಜಗಳನ್ನು ಹಿಡಿದು ಕೋಲುಗಳಿಂದ ಹಲ್ಲೆ ನಡೆಸಿದ್ದರು. ಈ ಪ್ರಕರಣದ ಪೊಲೀಸರು ತನಿಖೆ ನಡೆಸಿದ ಪೊಲೀಸರು ವಿಡಿಯೋಗಳನ್ನು ಆಧರಿಸಿ ಶಂಕಿತರನ್ನು ಗುರುತಿಸಲು ಪ್ರಯತ್ನಪಟ್ಟಿದ್ದಾರೆ. ಸದ್ಯ ಈ ಪ್ರಕರಣದ ತನಿಖೆ ಮುಂದುವರಿದಿದೆ.
Click