ಸೆಂಟ್ರಲ್ ಜೈಲಿನ ಅಧೀಕ್ಷಕಿಯ ಕಾರು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ..! ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನಿತಾ ವಿರುದ್ಧ ಸಿಡಿದೆದ್ದ ಕೈದಿಗಳು..!

ನ್ಯೂಸ್ ನಾಟೌಟ್: ಕಲಬುರಗಿಯ ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಎಂಬವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳಿಸಿದ ಘಟನೆ ಇಂದು(ನ.28) ನಡೆದಿದೆ. ಅನಾಮದೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ ಗೆ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದಾರೆ. ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ ಅನಿತಾ ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಚಾರ್ಜ್ ತೆಗೆದುಕೊಂಡ ದಿನವೆ ಕೈದಿಗಳ ಹೈ ಫೈ ಲೈಫ್ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಅವರು ಪರಿಗಣಿಸಿದ್ದರು. ಇದಾದ ಬಳಿಕ ಕಾರಾಗೃಹ ಇಲಾಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು.ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನಿತಾ ವಿರುದ್ಧ ಕೈದಿಗಳು ಮಂಗಳವಾರ ಪ್ರತಿಭಟನೆ ಮಾಡಿದ್ದರು. ಕಟ್ಟು ನಿಟ್ಟಿನ ರೂಲ್ಸ್ ವಿರುದ್ಧ ಕೇರಳಿದ ಕೈದಿಗಳಿಂದ ಬಂದ ಬೆದರಿಕೆ ಆಡಿಯೋನಾ? ಎಂಬ ಅನುಮಾನ ವ್ಯಕ್ತವಾಗಿದೆ. Click