ನ್ಯೂಸ್ ನಾಟೌಟ್ : ಪಾಕಿಸ್ತಾನದಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 19 ಯೋಧರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಜಂಟಿ ಚೆಕ್ ಪೋಸ್ಟ್ ಗೆ ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನ ಡಿಕ್ಕಿ ಹೊಡೆದಿದ್ದು ಪರಿಣಾಮ ಸ್ಥಳದಲ್ಲೇ 12 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸೇನೆ, ನಂತರ ನಡೆದ ಎನ್ ಕೌಂಟರ್ನಲ್ಲಿ ಆರು ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ಪಾಕ್ ನ ಬನ್ನು ಜಿಲ್ಲೆಯ ಮಲಿಖೇಲ್ ಪ್ರದೇಶದ ಜಂಟಿ ಚೆಕ್ ಪೋಸ್ಟ್ ಮೇಲೆ ಉಗ್ರರು ದಾಳಿ ನಡೆಸಲು ಯತ್ನಿಸಿದರು. ಆದರೆ ಭದ್ರತಾ ಪಡೆಗಳು ಪೋಸ್ಟ್ ಪ್ರವೇಶಿಸುವ ಅವರ ಪ್ರಯತ್ನವನ್ನು ಪರಿಣಾಮಕಾರಿಯಾಗಿ ವಿಫಲಗೊಳಿಸಿದವು ಎಂದು ಸೇನೆಯ ಮಾಧ್ಯಮ ವಿಭಾಗ ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ (ISPR) ತಿಳಿಸಿದೆ. ಅದೇ ವೇಳೆ ಮತ್ತೊಂದೆಡೆ ದಾಳಿ ನಡೆದಿದ್ದು, ತಿರಾಹ್ ಕಣಿವೆಯಲ್ಲಿ ಉಗ್ರರೊಂದಿಗೆ ಈ ಭೀಕರ ಗುಂಡಿನ ಕಾಳಗದಲ್ಲಿ ಏಳು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Click