ಗಡ್ಡ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿಯಿಂದ ಆದೇಶ, ಮುಸ್ಲಿಂ ವಿದ್ಯಾರ್ಥಿಗಳಿಂದ ಆಕ್ರೋಶ..!

ನ್ಯೂಸ್ ನಾಟೌಟ್: ಗಡ್ಡ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ತಮಗೆ ಸೂಚನೆ ನೀಡಿದೆ ಎಂದು 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ವಿಚಾರವಾಗಿ ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ಏರ್ಪಟ್ಟ ಘಟನೆ ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಈ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಗಡ್ಡ ತೆಗೆದು ಕಾಲೇಜು ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಆದರೆ, ಗಡ್ಡ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.“ನಮ್ಮ ಸಂಪ್ರದಾಯದಂತೆ ಗಡ್ಡ ಬಿಡುವುದು ನಮ್ಮ ಹಕ್ಕು. ಗಡ್ಡ ತೆಗೆಯುವಂತೆ ಸೂಚನೆ ನೀಡಿದ್ದು, ನಮ್ಮ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ” ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳ​​ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಹಾಗೂ ಅಲ್ಲಿನ ಪ್ರಮುಖ ನಾಯಕರಿಗೆ ಮನವಿ ಮಾಡಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳು ಜಮ್ಮು-ಕಾಶ್ಮೀರ ಸ್ಟುಡೆಂಟ್ಸ್ ಅಸೋಸಿಯೇಷನ್​ ಮುಂದೆಯೂ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.ಪ್ರಾಂಶುಪಾಲರು ಮಾತನಾಡಿ, ನರ್ಸಿಂಗ್ ಕೋರ್ಸ್ ಆಗಿರುವುದರಿಂದ ಕ್ಲಿನಿಕಲ್ ಲ್ಯಾಬ್‌ ನಲ್ಲಿ ಗಡ್ಡ ಬಿಟ್ಟುಕೊಂಡು ಭಾಗವಹಿಸಿದರೆ ಸಮಸ್ಯೆಯಾಗುತ್ತದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಹೇಳಿದ್ದೇವೆ ಎಂದಿದ್ದಾರೆ. Click