ನ್ಯೂಸ್ ನಾಟೌಟ್ : ತಮಿಳುನಾಡು ರಾಜ್ಯದ ಹೊಸೂರಿನಲ್ಲಿ ಕೋರ್ಟ್ ಆವರಣದಲ್ಲಿಯೇ ವಕೀಲನ ಮೇಲೆ ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಿರುವ ಘಟನೆ ಇಂದು(ನ.20) ನಡೆದಿದೆ.
ವಕೀಲ ಸಾವನ್ನಪ್ಪಿರುವುದಾಗಿ ತಿಳಿದುಬಂದಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಆಸ್ಪತ್ರೆ ಇನ್ನೂ ಸಾವಿನ ಬಗ್ಗೆ ಘೋಷಣೆ ಮಾಡಿಲ್ಲ ಎನ್ನಲಾಗಿದೆ.
ಕೋರ್ಟ್ ಆವರಣದಲ್ಲಿ ಸಹಾಯಕ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ವಕೀಲನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು ಎಂದು ತಿಳಿದುಬಂದಿದೆ.
ಅನೈತಿಕ ಸಂಬಂಧದ ಹಿನ್ನೆಲೆ ಈ ಘಟನೆ ನಡೆದ ಶಂಕೆ ವ್ಯಕ್ತವಾಗಿದ್ದು, ಆರೋಪಿಯ ಹೆಂಡತಿ ಮತ್ತು ವಕೀಲ ಕಣ್ಣನ್ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಗಡಿಭಾಗ ಆನೇಕಲ್ಗೆ ತುಸು ದೂರದಲ್ಲಿರುವ ತಮಿಳುನಾಡಿದ ಹೊಸೂರು ಕೋರ್ಟ್ ಆವರಣದಲ್ಲಿ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವಕೀಲ ಕಣ್ಣನ್ ಎಂದು ಗುರುತಿಸಲಾಗಿದೆ. ಆನಂದ್ ಎಂಬಾತ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವೇಳೆ ಯಾರೂ ಸಹಾಯಕ್ಕೆ ಬರದೇ ವಕೀಲ ಕಣ್ಣನ್ ಗೆ ಗಂಭೀರ ಗಾಯಗಳಾಗಿದ್ದು, ಕೋರ್ಟ್ ಆವರಣದಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾರೆ. ಇದಾದ ನಂತರ ಕೂಡಲೇ ಇತರ ವಕೀಲರು ಬಂದು ಅವರನ್ನು ಆಟೋದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಕೃತ್ಯದ ಬಳಿಕ ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ವರದಿ ತಿಳಿಸಿದೆ.
Click