- +91 73497 60202
- [email protected]
- November 29, 2024 8:21 PM
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಕಳೆದ 4 ತಿಂಗಳ ಅಂತರದಲ್ಲಿ ಇದು 2ನೇ ಭೇಟಿ
ನ್ಯೂಸ್ ನಾಟೌಟ್: ರಾಷ್ಟ್ರ ರಾಜಧಾನಿಯಲ್ಲಿ ಇಂದು(ನ,29) ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಕಳೆದ 4 ತಿಂಗಳ ಅಂತರದಲ್ಲಿ ಇದು ಅವರ 2ನೇ ಭೇಟಿಯಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆ, ನಬಾರ್ಡ್(NABARD) ಅಡಿ ಅನುದಾನ ಕಡಿತ, ರಾಜ್ಯದ ತೆರಿಗೆ ಪಾಲು ಹೆಚ್ಚಳ ಸೇರಿದಂತೆ ಹಲವು ಮಹತ್ವದ ವಿಚಾರ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ಮುಗಿದ ಬಳಿಕ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಭಾಗಿಯಾಗಿದ್ದಾರೆ. ಪ್ರಧಾನಿಯನ್ನು ಭೇಟಿಯಾಗಿರುವ ಸಿದ್ದರಾಮಯ್ಯ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ನಬಾರ್ಡ್ ಸಾಲದ ಪ್ರಮಾಣದಲ್ಲಿ 58% ಕಡಿತಗೊಳಿಸಿದ್ದು, ಪೂರ್ಣ ಪ್ರಮಾಣದ ಸಾಲ ನೀಡಬೇಕು. ನಬಾರ್ಡ್ ನಿಂದ 2023-24ರಲ್ಲಿ 5,600 ಕೋಟಿ ರೂ. ಕೃಷಿ ಸಾಲ ನೀಡಿತ್ತು. ಆದ್ರೆ 2024-25ರಲ್ಲಿ 2,340 ಕೋಟಿ ರೂ. ಕೃಷಿ ಸಾಲ ಮಾತ್ರ ನೀಡಿದೆ ಎಂದು ಗಮನಕ್ಕೆ ತರಲಾಗಿದೆ. ಜೊತೆಗೆ ಕಳಸಾ ಬಂಡೂರಿ ಯೋಜನೆ, ಮೇಕೆದಾಟು ಯೋಜನೆಗೆ ಕ್ಲಿಯರೆನ್ಸ್ ಗೆ ಮನವಿ ಮಾಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ