- +91 73497 60202
- [email protected]
- November 24, 2024 9:22 AM
ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ‘ಫೇಸ್ ಬುಕ್’ ಮೂಲಕ ಮಗುವನ್ನು ಮಾರಾಟ ಮಾಡಿದ ತಾಯಿ..! ಮುಂದೇನಾಯ್ತು..?
ನ್ಯೂಸ್ ನಾಟೌಟ್: ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿರುವ ಘಟನೆ ಅಮೆರಿಕದ ಟೆಕ್ಸಾಸ್ ನಲ್ಲಿ ಇಂದು(ಅ.7)ನಡೆದಿದೆ. ಮಹಿಳೆ ತನ್ನ ಮಗುವಿನ ಫೋಟೋವನ್ನು ಫೇಸ್‌ಬುಕ್ ನಲ್ಲಿ ಹಂಚಿಕೊಂಡು ಮಾರಾಟಕ್ಕೆ ಮುಂದಾಗಿದ್ದು, ವಿಷಯ ತಿಳಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.ಜುನಿಪರ್ ಬ್ರೈಸನ್(21) ಎಂಬ ಮಹಿಳೆ ಮಗುವಿನ ಫೋಟೋವನ್ನು ಹಂಚಿಕೊಂಡು, ಮಗು ದತ್ತು ಪಡೆಯಲು ಬಯಸುವ ದಂಪತಿಗಳ ಫೇಸ್ ಬುಕ್ ಗುಂಪಿನಲ್ಲಿ ಹಂಚಿಕೊಂಡಿದ್ದಾರೆ. ಪ್ರಾರಂಭದಲ್ಲಿ ಯಾವುದೇ ಹಣಕ್ಕೆ ಬೇಡಿಕೆ ಇಡದ ಈ ಮಹಿಳೆ ಬಳಿಕ ಸಾಕಷ್ಟು ದಂಪತಿಗಳು ದತ್ತು ಪಡೆಯಲು ಮುಂದೆ ಬಂದಾಗ ಹಣದ ಬೇಡಿಕೆ ಇಟ್ಟಿದ್ದಾಳೆ ಎನ್ನಲಾಗಿದೆ. ಹಣಕಾಸಿನ ತೊಂದರೆಗಳಿಂದ ನಾನು ನನ್ನ ಮಗುವನ್ನು ಮಾರಾಟ ಮಾಡಲು ಮುಂದಾಗಿರುವುದಾಗಿ ಜುನಿಪರ್ ಹೇಳಿಕೊಂಡಿದ್ದಾಳೆ. 150 ಡಾಲರ್ ಅಂದರೆ ಸುಮಾರು 12 ಸಾವಿರ ರೂ. ಗಳಿಗೆ ಬೇಡಿಕೆ ಇಟ್ಟಿದ್ದಾಳೆ. ಘಟನೆಯ ಬಗ್ಗೆ ತಿಳಿದ ಪೊಲೀಸರು ಮಗುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯ ನಂತರ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ