ನ್ಯೂಸ್ ನಾಟೌಟ್: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಇರುವಾಗ ಹೃದಯಾಘಾತದಿಂದ ಡ್ರೈವರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲ ಟೌನ್ ಬಿನ್ನಮಂಗಲ ಬಸ್ ನಿಲ್ದಾಣದ ಬಳಿ ಇಂದು(ನ.6) ನಡೆದಿದೆ.
ಹಾಸನ ಮೂಲದ ಚಾಲಕ ಕಿರಣ್ ಕುಮಾರ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು(ನವೆಂಬರ್ 06) ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್ ಮಾಡಿಕೊಂಡು ಹೋಗುತ್ತಿರುವಾಗಲೇ ಹೃದಯಾಘಾತವಾಗಿದೆ. ಕೂಡಲೇ ಚಾಲಕ ಕಿರಣ್ ಕುಮಾರ್ ಬಸ್ ಅನ್ನು ರಸ್ತೆ ಬದಿಗೆ ಹಾಕಿ ಅಲ್ಲೇ ಪ್ರಾಣಬಿಟ್ಟ ಘಟನೆ ಕರುಣಾಜನಕವಾಗಿದೆ.
ಡಿಪೋ ಸಂಖ್ಯೆ 40 ರಲ್ಲಿ ಕಳೆದ 6 ವರ್ಷದಿಂದ ಡೈವರ್ ಆಗಿ ಕೆಲಸ ಮಾಡುತ್ತಿದ್ದರು. ದುರದೃಷ್ಟವಶಾತ್ ಇಂದು ಬಸ್ ಚಾಲನೆ ಮಾಡುವಾಗಲೇ ಹೃದಯಘಾತವಾಗಿದೆ. ಕೂಡಲೇ ನಿರ್ವಾಹಕ ಒಬಳೇಶ್ ಸಹಾಯದಿಂದ ಚಾಲಕನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಷ್ಟರಾಗಲೇ ಕಿರಣ್ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂದು ವೇಲೆ ಹಾಗೇ ಬಸ್ ರನ್ನಿಂಗ್ ನಲ್ಲಿ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಇನ್ನು ಬಸ್ ನಲ್ಲಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ.
Click