- +91 73497 60202
- [email protected]
- December 3, 2024 10:45 PM
ಹಾಸನಾಂಬೆಯ ಸಾರ್ವಜನಿಕ ದರ್ಶನ ಇಂದಿಗೆ ಕೊನೆ..! ಕೇವಲ 9 ದಿನಗಳಲ್ಲಿ 9 ಕೋಟಿ ರೂ.ಗೂ ಅಧಿಕ ಆದಾಯ ಸಂಗ್ರಹ..!
ನ್ಯೂಸ್ ನಾಟೌಟ್ : ಹಾಸನಾಂಬೆ ತಾಯಿಯ ದರ್ಶನಕ್ಕೆ ತೆರೆ ಬಿದ್ದಿದ್ದು, ಇಷ್ಟು ದಿನ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ.ಅಕ್ಟೋಬರ್ 24 ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ನವೆಂಬರ್ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. 9 ದಿನಗಳಲ್ಲಿ ದಾಖಲೆಯ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದು, ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದು ಬಂದಿದೆ ಎಂದು ವರದಿ ತಿಳಿಸಿದೆ. ಇಂದು(ನ.3) ಬೆಳಗ್ಗೆ 11.50ರ ನಂತರ ದೇವಿಯ ವಿಶ್ವರೂಪ ದರ್ಶನದ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ, ಶಾಸಕ ಸ್ವರೂಪ್, ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್ಪಿ ಮೊಹಮ್ಮದ್ ಸುಜಿತಾ ಮತ್ತು ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್ ಮಾಡಲಾಗುತ್ತದೆ ಎನ್ನಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ