- +91 73497 60202
- [email protected]
- November 22, 2024 10:22 PM
ಹೆಚ್.ಡಿ ಕುಮಾರಸ್ವಾಮಿ ಮತ್ತು ಮಗ ನಿಖಿಲ್ ವಿರುದ್ಧ ಬೆಂಗಳೂರಿನಲ್ಲಿ ಎಫ್.ಐ.ಆರ್..! ಕೇಂದ್ರ ಸಚಿವ ಎ1 ಆರೋಪಿ..!
ನ್ಯೂಸ್ ನಾಟೌಟ್: ಎಡಿಜಿಪಿ ಚಂದ್ರಶೇಖರ್ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಆರೋಪಿ ನಂಬರ್ 1 ಎಂದು ಉಲ್ಲೇಖಿಸಲಾಗಿದೆ. ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿ ನಂಬರ್ 2 ಆಗಿದ್ದಾರೆ. ಮತ್ತು ಜೆಡಿಎಸ್ ಮುಖಂಡ ಸುರೇಶ್ ಬಾಬು ಆರೋಪಿ ನಂಬರ್ 3 ಆಗಿದ್ದಾರೆ. ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.ನಿಯಮ ಉಲ್ಲಂಘನೆ ಮಾಡಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಚಂದ್ರಶೇಖರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದಕ್ಕೆ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಸಂಚು ಹೂಡಿದ್ದಾರೆ. ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ಕೊಡಿ ಎಂದು ನಿಮ್ಮನ್ನು ಐಪಿಎಸ್ ಆಫೀಸರ್ ಮಾಡಿದ್ದಾರಾ? ನಾನು ಬೇಲ್ ತಗೊಂಡೆ, ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ನೀವು ಏನ್ ಮಾಡಿದ್ದೀರಿ? ನಿಮ್ಮ ವಿರುದ್ಧವೇ ಕೇಸ್ ಇದೆ, ಆರೋಪಿ ನಂಬರ್ 2. ಹೈಕೋರ್ಟ್ನಲ್ಲಿ ಅಧಿಕಾರಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು. ಈ ಬಳಿಕ ಎಡಿಜಿಪಿ ಚಂದ್ರಶೇಖರ್ ತಮ್ಮ ಸಿಬ್ಬಂದಿಗೆ ಪತ್ರ ಬರೆದು, ಹೆಚ್ ಡಿ ಕುಮಾರಸ್ವಾಮಿ ಅವರು ನನ್ನ ಮೇಲೆ ಸಾಕಷ್ಟು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮತ್ತು ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವರು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ಬ ಆರೋಪಿ. ಇಂತಹ ಆರೋಪ ಮತ್ತು ಬೆದರಿಕೆಗಳಿಗೆ ನಾವು ನಿರಾಶೆಗೊಳ್ಳಬಾರದರು ಎಂದು ಪತ್ರದಲ್ಲಿ ಬರೆದಿದ್ದರು. ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ ಎಂದು ಪತ್ರದಲ್ಲಿ ಜಾರ್ಜ್ ಬರ್ನಾಡ್ ಶಾ ಅವರ ಹೇಳಿಕೆ ಉಲ್ಲೇಖಿಸಿದ್ದರು. ಈ ಬಳಿಕ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಈಗ ಆ ಸಂಬಂಧ ಎಫ್.ಐ.ಆರ್ ದಾಖಲಾಗಿದ್ದು, ಕುಮಾರಸ್ವಾಮಿ A1 ಆರೋಪಿಯಾಗಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ