ನ್ಯೂಸ್ ನಾಟೌಟ್: ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಸಂಜೀವ್ ಖನ್ನಾ ಸೋಮವಾರ(ನ.11) ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನ್ಯಾಯಮೂರ್ತಿ ಸಂಜೀವ್ ಖನ್ನಾ(64) ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.
ನವೆಂಬರ್ 10ರಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸಿಜೆಐ ಹುದ್ದೆಯಿಂದ ನಿವೃತ್ತರಾಗಿದ್ದರು. ನ್ಯಾಯಮೂರ್ತಿ ಸಂಜೀವ್ ಖನ್ನಾ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಆರು ತಿಂಗಳ ಅವಧಿಗೆ ಸೇವೆ ಸಲ್ಲಿಸಲಿದ್ದಾರೆ.
ನಿರ್ಗಮಿತ ಸಿಜೆಐ ಡಿವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪ್ರಸ್ತಾಪಿಸಿದ್ದರು. ಅವರ ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರ ನೂತನ ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಿತ್ತು.
Click