ಭಾರತ ಮತ್ತು ಆಸ್ಟ್ರೇಲಿಯಾದ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿ ಪ್ರಸಾರ ಮಾಡಿದ ಮಾಧ್ಯಮಕ್ಕೆ ಕೆನಡಾದಲ್ಲಿ ನಿರ್ಬಂಧ..! ಈ ಬಗ್ಗೆ ಸಚಿವಾಲಯ ಹೇಳಿದ್ದೇನು..?

ನ್ಯೂಸ್ ನಾಟೌಟ್: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಆಸ್ಟ್ರೇಲಿಯಾ ವಿದೇಶಾಂಗ ಸಚಿವ ಪೆನ್ನಿ ವಾಂಗ್ ಅವರ ಪತ್ರಿಕಾಗೋಷ್ಠಿಯನ್ನು ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾ ಆಸ್ಟ್ರೇಲಿಯಾದ ಮಾಧ್ಯಮವೊಂದನ್ನು ನಿರ್ಬಂಧಿಸಿದ ಘಟನೆ ನಡೆದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಮಾತನಾಡಿದ್ದು, ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಗಳು ಮತ್ತು ಆಸ್ಟ್ರೇಲಿಯಾ ಟುಡೆಯ ಕೆಲವು ಪುಟಗಳನ್ನು ನಿರ್ಬಂಧಿಸುವ ಕೆನಡಾದ ಕ್ರಮ ವಾಕ್ ಸ್ವಾತಂತ್ರ್ಯದ ಬಗ್ಗೆ ಬೂಟಾಟಿಕೆಯನ್ನು ಬಯಲು ಮಾಡಿದೆ ಎಂದು ಹೇಳಿದ್ದಾರೆ. “ನಮಗೆ ಕೆನಡಾದ ನಡೆ ಅಚ್ಚರಿ ಉಂಟುಮಾಡಿದೆ. ಇದು ನಮಗೆ ವಿಚಿತ್ರವಾಗಿ ಕಾಣುತ್ತದೆ.” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ.