ನ್ಯೂಸ್ ನಾಟೌಟ್: ಪೊಲೀಸ್ ಅಧೀಕ್ಷಕರ ಸೂಚನೆಯ ಮೇರೆಗೆ ಮಾದಕವಸ್ತು ಸೇವನೆ ಮತ್ತು ಅಕ್ರಮ ಮದ್ಯಮಾರಾಟದ ವಿರುದ್ದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ, ಕಡಬ, ಅರಂತೋಡು ಸೇರಿದಂತೆ ನಾಲ್ಕು ಪ್ರತ್ಯೇಕ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಮದ್ಯ ವಶಕ್ಕೆ ಪಡೆದುಕೊಂಡ ಘಟನೆ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅರಂತೋಡು ಪೇಟೆಯ ಅಡ್ಕಬಳೆ ರಸ್ತೆಯ ಗುಳಿಗರಾಜ ಚಿಕನ್ ಸೆಂಟರ್ ಎಂಬ ಹೆಸರಿನ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 1760/- ರೂಪಾಯಿ ಮೌಲ್ಯದ 3.960 ಲೀಟರ್ ಮದ್ಯವನ್ನು ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ಕಳೆದ ಶನಿವಾರ(ನ.23) ರಂದು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ, ಅಲ್ಲದೆ ಆರೋಪಿ ದಿನೇಶ್ ಕೆ ಹಾಗೂ ಕಾನೂನು ಬಾಹಿರವಾಗಿ ಮದ್ಯವನ್ನು ಮಾರಾಟ ಮಾಡಿರುವ ವೈನ್ ಶಾಪ್ ನ ಮಾಲಕನ ವಿರುದ್ದ ಕಲಂ 32, 34 ಕರ್ನಾಟಕ ಅಬಕಾರಿ ಕಾಯ್ದೆ 1965 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ ಶನಿವಾರ (ನ.23) ರಾತ್ರಿ ಕಡಬ ಕಸಬ ಸಂತೆ ಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಧ್ಯಪಾನ ಮಾಡುತ್ತಿದ್ದ ಆರೋಪಿ ಸುರೇಶ (50) ಎಂಬಾತನ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನ ಬಳಿಯಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅದೇ ದಿನ ಸಂಜೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಕಲ್ಲಾಜೆ ಗುಡ್ಡೆ ಎಂಬಲ್ಲಿ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಮದ್ಯಪಾನ ಮಾಡುತ್ತಿದ್ದ ಬೆಳಿಯಪ್ಪ ಗೌಡ (58) ಎಂಬಾತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಳಿಯಿದ್ದ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Click