KSRTC ಯಲ್ಲಿ ಇನ್ನು ಮುಂದೆ ಫೋನ್ ಪೇ, ಗೂಗಲ್ ಪೇ ಮೂಲಕ ಟಿಕೆಟ್..? ಪ್ರಾಯೋಗಿಕ ಪರೀಕ್ಷೆಗೆ ಮುಂದಾದ ಸಾರಿಗೆ ನಿಗಮ

ನ್ಯೂಸ್ ನಾಟೌಟ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದಿನದಿಂದ ದಿನಕ್ಕೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುತ್ತಿದೆ. ಸಂಪೂರ್ಣ ಡಿಜಿಟಲ್ ಆಗುವತ್ತ ಪ್ರಯತ್ನ ಆರಂಭಿಸಿದೆ. ಇದಕ್ಕಾಗಿ ಪ್ರಾಯೋಗಿಕ ಯೋಜನೆಯನ್ನು ಆಯ್ದ ಬಸ್‌ ಗಳಲ್ಲಿ ಜಾರಿಗೊಳಿಸಿದೆ ಎಂದು ವರದಿ ತಿಳಿಸಿದೆ.ಕೆ.ಎಸ್.ಆರ್‌.ಟಿ.ಸಿ ಬಸ್‌ಗಳಲ್ಲಿ ‘ಚಿಲ್ಲರೆ’ ವಿಚಾರಕ್ಕೆ ಜಗಳ ಆಗುವುದನ್ನು ತಪ್ಪಿಸಲು ನಿಗಮ ಮೊದಲ ಹೆಜ್ಜೆ ಇಟ್ಟಿದೆ ಎನ್ನಲಾಗಿದೆ. ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಳಿಕ ಕೆಎಸ್ಆರ್‌ಟಿಸಿ ತನ್ನ ಆಯ್ದ ಬಸ್‌ ಗಳಲ್ಲಿ ಟಿಕೆಟ್ ಪಡೆಯಲು ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದೆ. ಸದ್ಯ ಕೆಲವು ಬಸ್‌ ಗಳಲ್ಲಿ ಮಾತ್ರ ಈ ಸೌಲಭ್ಯವಿದೆ. ಹಂತ ಹಂತವಾಗಿ ಎಲ್ಲಾ ಮಾದರಿ ಬಸ್‌ಗಳಲ್ಲಿ ಈ ಸೌಲಭ್ಯ ಜಾರಿಗೊಳಿಸಲು ಕೆಎಸ್ಆರ್‌ಟಿಸಿ ಮುಂದಾಗಿದೆ. ಇದೀಗ KSRTCಯ ಬಸ್‌ ಗಳಲ್ಲಿ ಡಿಜಿಟಲ್ ಪಾವತಿ ಸೌಲಭ್ಯ. ಪ್ರಯಾಣಿಕರು ನಿರ್ವಾಹಕರಿಂದ ಡೈನಮಿಕ್ ಕ್ಯುಆರ್ ಕೋಡ್ ಮೂಲಕ ಟಿಕೆಟ್ ಪಡೆಯಬಹುದು ಎಂದು ಕೆಎಸ್ಆರ್‌ಟಿಸಿ ಹೇಳಿದೆ. ಫೋನ್ ಪೇ, ಗೂಗಲ್ ಪೇ, ಭೀಮ್, ಯಪಿಐ ಈ ನಾಲ್ಕು ವ್ಯವಸ್ಥೆಗಳ ಮೂಲಕ ಡಿಜಿಟಲ್ ಪೇಮೆಂಟ್ ಮಾಡಬಹುದಾಗಿದೆ. Click