ನ್ಯೂಸ್ ನಾಟೌಟ್: ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಅಹ್ಮದ್ ಖಾನ್ ‘ಕಾಲಾ ಕುಮಾರಸ್ವಾಮಿ’ (ಕರಿಯ ಕುಮಾರಸ್ವಾಮಿ) ಎಂದು ಕರೆದಿದ್ದಾರೆ. ಆ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಜಮೀರ್ ಮಾತನಾಡಿರುವ ವಿಡಿಯೋವನ್ನು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ‘ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ಅವರನ್ನು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ’ ಎಂದು ಆರೋಪಿಸಿದೆ.
‘ಜಮೀರ್ ಅಹ್ಮದ್ ಖಾನ್ ಕಪ್ಪು ವರ್ಣದವರ ಬಗ್ಗೆ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಚೋದಿಸಿರುವುದು ಅಕ್ಷಮ್ಯ ಅಪರಾಧ’ ಎಂದು ಜೆಡಿಎಸ್ ಕಿಡಿಕಾರಿದೆ.
‘ಕೂಡಲೇ ಗೃಹ ಸಚಿವ ಜಿ.ಪರಮೇಶ್ವರ ಹಾಗೂ ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್ ಅಹಮದ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಜೆಡಿಎಸ್ ಆಗ್ರಹಿಸಿದೆ.
Click