ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ (ನ.29) 2024 -25ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳಿಗೆ ಶಿಶ್ಯೋಪನಯನ ಹಾಗೂ ಗಣಪತಿ ಹವನ ಸಹಿತ ಧನ್ವಂತರಿ ಪೂಜೆ ಪುರೋಹಿತ ನಾಗರಾಜ್ ಭಟ್ ಹಾಗೂ ನಟರಾಜ್ ಶರ್ಮಾ ಅವರ ವೈದಿಕತ್ವದಲ್ಲಿ ನಡೆಯಿತು.
ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಎಒಎಲ್ಇ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಸಲಹೆಗಾರರದ ದಾಮೋದರ ಗೌಡ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲ್, ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.