ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ..! ಸರ್ಕಾರಿ ಅಧಿಕಾರಿಗಳಿಗೆ ಶಾಕ್..!

ಇಂದು(ನ.12) ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ.ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಸಿಪಿಐ ಮಧುಸೂಧನ್, ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಮನೆಯ ಪ್ರತಿಯೊಂದು ಕೋಣೆಯನ್ನು ಪರಿಶೀಲನೆ ಮಾಡಿದ್ದಾರೆ.ಇತ್ತ, ಧಾರವಾಡದಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ಕೂಡ ದಾಳಿ ನಡೆದಿದೆ. ಆಸ್ತಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.ಗೋವಿಂದಪ್ಪ ಭಜಂತ್ರಿಗೆ ಸಂಬಂಧಪಟ್ಟ ಆರು ಕಡೆ ದಾಳಿ ಮಾಡಲಾಗಿದೆ. ಧಾರವಾಡದಲ್ಲಿ ಮೂರು ಕಡೆ, ಸವದತ್ತಿ ತಾಲೂಕಿನಲ್ಲಿ ಎರಡು ಕಡೆ ಹಾಗೂ ನರಗುಂದದಲ್ಲಿ ಒಂದು ಕಡೆ ದಾಳಿ ನಡೆದಿದೆ. ಸವದತ್ತಿ ತಾಲೂಕಿನ ಹೂಲಿ ಹಾಗೂ ಉಗರಗೋಳ ಗ್ರಾಮದ ಫಾರ್ಮ್ ಹೌಸ್ ಮೇಲೆಯೂ ರೇಡ್ ಮಾಡಲಾಗಿದೆ. ಗೋವಿಂದಪ್ಪ ಕೆಲಸ ಮಾಡುವ ಲಕಮನಹಳ್ಳಿ ಧಾರವಾಡ ಕೆಐಎಡಿಬಿ ಕಚೇರಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ನರಗುಂದದಲ್ಲಿರೋ ಸಹೋದರನ ಮನೆ ಮೇಲೂ ದಾಳಿ ನಡೆದಿದೆ. ಗೋವಿಂದಪ್ಪನ ಮನೆ ಎದುರು ನಿಲ್ಲಿಸಿದ್ದ ಕಾರುಗಳ ಪರಿಶೀಲನೆ ಮಾಡಲಾಗಿದೆ. ದಾಖಲೆ ಪತ್ರಗಳ ಪರಿಶೀಲನೆ ನಡೆದಿದೆ. Click