- +91 73497 60202
- [email protected]
- November 25, 2024 5:10 PM
ನ್ಯೂಸ್ ನಾಟೌಟ್: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂದಾಯ ಇಲಾಖೆಯ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ಮೇಲ್ನೋಟಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಮಾಡಿದ್ದಾರೆ ಎನ್ನಲಾಗಿದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆಯಾಗಿತ್ತು. ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು. ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಪುರಾಣದ ದೇವಿ ಮಹಾತ್ಮೆಯಲ್ಲಿ ತಾಯಿ ಚಾಮುಂಡಿಯ ಪ್ರಸ್ತಾಪವಿದೆ. ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ಯಲ್ಲಿ ವರ್ಣಿತವಾಗಿದೆ ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟವೆಂಬ ಹೆಸರು ಬಂದಿದೆ. ಸ್ಕಂದ ಪುರಾಣದಲ್ಲಿ ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರವೆಂಬ ಪವಿತ್ರ ಕ್ಷೇತ್ರ ಉಲ್ಲೇಖಿತವಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ