ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ರಚನೆ ಸ್ಪರ್ಧೆ, ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ :ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನವೆಂಬರ್ 09 ಶನಿವಾರದಂದು ವಿಜ್ಞಾನ ಮಾದರಿ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿಜ್ಞಾನ ವಿಭಾಗ ಸಂಯೋಜಕರು ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರಾದ ಸತ್ಯಪ್ರಕಾಶ್ ಡಿ ಹಾಗೂ ವಿಜ್ಞಾನ ಸಂಘದ ಸಂಚಾಲಕಿ ಅಶ್ವಿನಿ ಕೆ ಸಿ ಮುಂದಾಳತ್ವದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. View this post on Instagram A post shared by News not out (@newsnotout) ಕಾಲೇಜಿನ ವಿಜ್ಞಾನ ವಿಭಾಗಗಳ ವಿವಿಧ ಪ್ರಯೋಗಾಲಯಗಳಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ನೆಹರೂ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ವಿನುತ, ಭೌತಶಾಸ್ತ್ರ ಉಪನ್ಯಾಸಕಿ ಸುಚೇತ ಮತ್ತು ಗಣಕಶಾಸ್ತ್ರ ಉಪನ್ಯಾಸಕಿ ನಯನ ಸಹಕರಿಸಿದರು. ವಿಜ್ಞಾನ ಪದವಿ ಉಪನ್ಯಾಸಕರಾದ ಉಷಾ ಎಂ ಪಿ, ಅಕ್ಷತಾ ಬಿ, ಕುಲದೀಪ್ ಪೆಲ್ತಡ್ಕ, ಕೃತಿಕಾ ಕೆ ಜೆ, ಹರ್ಷಕಿರಣ ಬಿ ಆರ್, ಪಲ್ಲವಿ ಕೆ ಎಸ್, ಹರ್ಷಿತಾ ಮತ್ತು ಅಜಿತ್ ಕುಮಾರ್ ಮಾರ್ಗದರ್ಶನ ನೀಡಿದ್ದಾರೆ. ಲ್ಯಾಬ್ ಸಹಾಯಕಿ ಸಿಬ್ಬಂದಿ ಜಯಂತಿ, ಸೌಮ್ಯ, ಗೀತಾ ಮತ್ತು ಭವ್ಯ ಸಹಕರಿಸಿದರು. ವಿಜ್ಞಾನ ಪದವಿ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. Click