ನ್ಯೂಸ್ ನಾಟೌಟ್: ಅಬಕಾರಿ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟದ ಬಂದ್ ಗೆ ಕರೆ ನೀಡಲಾಗಿದೆ.
ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂ.ಎಸ್.ಐ.ಎಲ್ ಹೊರತುಪಡಿಸಿ ಎಲ್ಲಾ ಬಾರ್ ಗಳ ಬಂದ್ ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ಸಿಎಲ್ 7 ಬಾರ್ ಗಳಿಗೆ ಬೇಕಾ ಬಿಟ್ಟಿ ಲೈಸನ್ಸ್ ಕೊಡಲಾಗುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದೇ ಇಲ್ಲ. ನಮ್ಮ ಬೇಡಿಕೆಗಳ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆ ಬಗ್ಗೆ ಸರ್ಕಾರ ತಿರ್ಮಾನ ತೆಗೆದುಕೊಂಡರೆ ಒಳ್ಳೇದು ಎಂದು ಹೇಳಿದ್ದಾರೆ.
Click