- +91 73497 60202
- [email protected]
- November 27, 2024 10:01 PM
ನ್ಯೂಸ್ ನಾಟೌಟ್ : ಕಲಬುರಗಿಯ ಜಿಲ್ಲಾಸ್ಪತ್ರೆಯ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗದಿಂದ ಅಪಹರಿಸಲ್ಪಟ್ಟಿದ್ದ ನವಜಾತ ಶಿಶುವನ್ನು ನಗರ ಪೊಲೀಸರು 36 ಗಂಟೆಗಳ ಒಳಗೆ ಪತ್ತೆ ಹಚ್ಚಿ ಮಗುವನ್ನು ತಾಯಿಯ ಮಡಿಲಿಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ(ನ.25) ಕಳವಾಗಿದ್ದ ಮಗುವನ್ನು ಕಮಿಷನರ್ ಡಾ.ಶರಣಪ್ಪ ಎಸ್.ಡಿ. ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಿ ಮಂಗಳವಾರ ತಡರಾತ್ರಿ ಆಸ್ಪತ್ರೆಗೆ ಧಾವಿಸಿ, ತಾಯಿಯ ಮಡಿಲಿಗೆ ಸೇರಿಸಿದೆ. ಈ ವೇಳೆ ಭಾವುಕರಾದ ಪೋಷಕರು ಪೊಲೀಸರಿಗೆ ಧನ್ಯವಾದ ಸಲ್ಲಿಸಿದರು. ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಸೋಮವಾರ ಮುಂಜಾನೆ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಅಪಹರಿಸಿದ್ದರು. ಈ ಬಗ್ಗೆ ಬ್ರಹ್ಮಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ