- +91 73497 60202
- [email protected]
- November 22, 2024 10:03 PM
ನ್ಯೂಸ್ ನಾಟೌಟ್: ಪೊಲೀಸ್ ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ ನಲ್ಲಿ ಭಾನುವಾರ(ನ.5) ರಾತ್ರಿ ನಡೆದಿದೆ. ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು ಎಂದು ವರದಿ ತಿಳಿಸಿದೆ. ಹರೀಶ್ ವಿವಾಹವು ನ.11ರಂದು ನಿಗದಿಯಾಗಿತ್ತು. ವಿವಾಹ ಆಮಂತ್ರಣ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಿ ಕಳೆದ ರಾತ್ರಿ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ಈ ಕೃತ್ಯ ಎಸಗಲಾಗಿದೆ. ದುಷ್ಕರ್ಮಿಗಳು ಅವರ ಬೈಕಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಹಾಸನ ಎಸ್ಪಿ ಮುಹಮ್ಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ