ನ್ಯೂಸ್ ನಾಟೌಟ್: ಮಂಗಳೂರು ವಿಶ್ವವಿದ್ಯಾಲಯ, ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂಚೆ ಸೇವೆ ಕುರಿತಾದ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸಂಪನ್ಮೂಲ ವ್ಯಕ್ತಿ ಸುಳ್ಯದ ಮುಖ್ಯ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಮೊಹನ್ ಎಂ.ಕೆ. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಅಂಚೆ ಸೇವೆಯ ಕುರಿತಾದ ಮಾಹಿತಿ ನೀಡಿದರು. ಅಂಚೆ ಸಾಮಾಜಿಕ ಭದ್ರತೆ ಪಿಂಚಣಿ ಗೃಹಲಕ್ಷ್ಮಿ ಯೋಜನೆ ವಿದ್ಯಾರ್ಥಿವೇತನದಂತಹ ಸೇವೆ ನೀಡುತ್ತಿದೆ. ಸರಕಾರದ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸುವಲ್ಲಿ ಸಹಕಾರಿಯಾಗಿದೆ. ಅಂಚೆ ಕಚೇರಿಯಲ್ಲಿ ದೊರೆಯುವ ವಿವಿಧ ರೀತಿಯ ಸೇವಿಂಗ್ಸ್ ಪ್ಲಾನ್ ಹಾಗೂ ವಿಮಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಎನ್.ಎಸ್.ಎಸ್ ಘಟಕಾಧಿಕಾರಿ ಚಿತ್ರಲೇಖ ಕೆ ಎಸ್, ಹಾಗೂ ಹರಿಪ್ರಸಾದ್ ಎನ್,ಎಸ್,ಎಸ್ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಹರಿಪ್ರಸಾದ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಗೌತಮಿ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.