ಆರ್.ಬಿ.ಐ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು..!ಹೇಳಿಕೆ ಹೊರಡಿಸಿದ RBI ವಕ್ತಾರರು..!

ನ್ಯೂಸ್ ನಾಟೌಟ್: ಭಾರತೀಯ ರಿಸರ್ವ್ ಬ್ಯಾಂಕ್( RBI) ಗವರ್ನರ್ ಶಕ್ತಿಕಾಂತ ದಾಸ್ ಅನಾರೋಗ್ಯದ ಹಿನ್ನೆಲೆ ಮಂಗಳವಾರ(ನ.26) ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಕ್ತಿಕಾಂತ ದಾಸ್ ಅಸಿಡಿಟಿ ಸಂಬಂಧಿತ ಸಮಸ್ಯೆಗಳಿಂದ ತೀವ್ರವಾಗಿ ಬಳಲುತ್ತಿದ್ದರು ಎನ್ನಲಾಗಿದೆ, ಈ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಕುರಿತು ಆರ್ ಬಿಐ ವಕ್ತಾರರು ಹೇಳಿಕೆಯನ್ನು ಹೊರಡಿಸಿದ್ದು, ಶಕ್ತಿಕಾಂತ ದಾಸ್ ಆರೋಗ್ಯವಾಗಿದ್ದಾರೆ ಮತ್ತು ಮುಂದಿನ 3 ಗಂಟೆಗಳ ಒಳಗಡೆ ಡಿಸ್ಚಾರ್ಜ್ ಆಗುತ್ತಾರೆ. ಯಾರು ಕೂಡ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. Click