ನ್ಯೂಸ್ ನಾಟೌಟ್: ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್ ಹಾಗೂ ಇತರ ಆರೋಗ್ಯ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ಈ ಅಕ್ರಮ ಸಂಬಂಧ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ಗೆ ಆಯೋಗವು ಶಿಫಾರಸು ಮಾಡಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಆ.25, 2023ರಲ್ಲಿ ರಚನೆಯಾಗಿದ್ದ ತನಿಖಾ ಆಯೋಗ ಸರಕಾರಕ್ಕೆ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಅಲ್ಲದೆ, ಈ ಆಯೋಗವು ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದಾಗಿ ತಿಳಿಸಿದೆ.