- +91 73497 60202
- [email protected]
- November 25, 2024 5:02 PM
ನ್ಯೂಸ್ ನಾಟೌಟ್: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಪ್ರಕರಣ ಹಿನ್ನೆಲೆ ರಾಯಚೂರಿನ ಮಾನ್ವಿಯಲ್ಲಿ ಮುಂಬೈ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಕರೆದೊಯ್ದಿದ್ದಾರೆ. ಮಾನ್ವಿಯಲ್ಲಿ ಟೈಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೋಹೆಲ್ ಪಾಷಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ನವೆಂಬರ್ 11ರಂದು ಆರೋಪಿಯನ್ನ ಬಂಧಿಸಿ ಮುಂಬೈಗೆ ಕರೆದೊಯ್ಯಲಾಗಿದೆ. ಮುಂಬೈ ವರ್ಲಿ ಪೊಲೀಸ್ ಠಾಣೆಯಿಂದ ಆರೋಪಿಯ ಪೋಷಕರಿಗೆ ಇಂದು(ನ.13) ಕರೆ ಬಂದಿದ್ದು, ವಿಚಾರಣೆಗೆ ಮುಂಬೈಗೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ. ಇದೀಗ ಮಗನ ಬಂಧನದಿಂದ ಬಡ ಕುಟುಂಬ ಕಣ್ಣೀರಿಡುತ್ತಿದೆ. ಸಲ್ಮಾನ್ ಖಾನ್ ಅಪ್ಪಟ ಅಭಿಮಾನಿಯಾಗಿದ್ದ ಸೋಹೆಲ್ ಪಾಷಾ, ಬಹುಬೇಗ ಹೆಸರು ಮಾಡಲು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೆಸರಲ್ಲಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸ್ ಸಹಾಯವಾಣಿ ವಾಟ್ಸ್ ಆಪ್ ನಂಬರ್ ಗೆ ನ.7ರಂದು ಕೊಲೆ ಬೆದರಿಕೆ ಮೆಸೇಜ್ ಮಾಡಿದ್ದ, 5 ಕೋಟಿ ಬೇಡಿಕೆ ಇಟ್ಟಿದ್ದ. ಬೇರೆಯವರ ಮೊಬೈಲ್ ನಂಬರ್ ಬಳಸಿ ವಾಟ್ಸ್ ಆಪ್ ಮೆಸೇಜ್ ಮಾಡಿದ್ದ ಸೋಹೆಲ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮಗ ಮಾಡಿದ ತಪ್ಪಿಗೆ ಪೋಷಕರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ