ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಶುಕ್ರವಾರ (ನ.29) ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.) ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಕಾಲೇಜು ಆರಂಭಗೊಂಡ ದಿನದಿಂದ ಇಲ್ಲಿಯ ತನಕ ನಡೆದು ಬಂದ ದಾರಿ ಮತ್ತು ಅದಕ್ಕಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಪಟ್ಟ ಪರಿಶ್ರಮದ ಬಗ್ಗೆ ವಿವರಿಸಿದರು.
ಮುಖ್ಯ ಅತಿಥಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳ ಒಕ್ಕೂಟ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿಗಳ ನಡುವಿನ ಒಗ್ಗಟ್ಟು ಮತ್ತು ಅದರ ಮಹತ್ವವನ್ನು ವಿವರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಎಡ್ವೈಸರ್ ಪ್ರೊ.ದಾಮೋದರ ಗೌಡ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ನಾಯಕಿ ಡಾ. ಅನುಷ ಮಡಪ್ಪಾಡಿ, ವಿದ್ಯಾರ್ಥಿ ನಾಯಕ ಶೀತಲ್ ಗೌಡ, ವಿದ್ಯಾರ್ಥಿನಿ ನಾಯಕಿ ನಿತ್ಯಾ ದಾಸ್, ಕಾರ್ಯದರ್ಶಿ ಲಕ್ಷ್ಮಿ ಸುರೇಶ್, ಕಲಿಕಾ ವೈದ್ಯರ ನಾಯಕ ಡಾ.ಆರ್ತಿಕ್ ಕೆ.ಎಸ್., ನಾಯಕಿ ಡಾ. ಸ್ನೇಹ ಕೆ., ಉಪಸ್ಥಿತರಿದ್ದರು
ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಗಳಾದ ಡಾ. ಹರ್ಷಿತ ಪುರುಷೋತ್ತಮ್ ಅವರು 2024-25ನೇ ಸಾಲಿನ ನೂತನ ವಿದ್ಯಾರ್ಥಿ ಸಂಘವನ್ನು ಸಭೆಗೆ ಪರಿಚಯಿಸಿ ಅವರಿಗೆ ವಿದ್ಯಾರ್ಥಿ ಮಂಡಲದ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಕಾಲೇಜಿನಲ್ಲಿ ತ್ರೈಮಾಸಿಕ ಪತ್ರಿಕೆ ಆಯುರ್ ನ್ಯೂಸ್ ನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಚಿದಾನಂದ ಕೆ.ವಿ. ಬಿಡುಗಡೆಗೊಳಿಸಿದರು. ಕಾಲೇಜಿನ ದ್ರವ್ಯಗುಣ ವಿಭಾಗದ ಪ್ರೊಫೆಸರ್ ಡಾ. ಕವಿತ ಬಿ.ಎಂ ಇವರು ಎಲ್ಲರನ್ನೂ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ. ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿಗಳಾದ ಚಿತ್ಕಲ ಭಾರದ್ವಾಜ್ ಮತ್ತು ಅಶ್ವಿನಿ ಪ್ರಾರ್ಥಿಸಿದರು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಪ್ರತಿನಿಧಿ ಡಾ. ಅನುಷ ಮಡಪ್ಪಾಡಿ ವಂದಿಸಿದರು. ಕಲಿಕಾ ವೈದ್ಯರಾದ ಡಾ.ಕೃತಿಕಾ ಹಾಗೂ ಡಾ.ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.